ಅವರು ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿ, ಮೂಲ ಸೌಕರ್ಯ, ಅಭಿವೃದ್ಧಿ, ಶಿಕ್ಷಣ, ಕೃಷಿ, ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಒದಗಿಸಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸಾಮಾಜಿಕ ಭದ್ರತೆಗೆ ಆಶಯವುಳ್ಳ ದೂರದೃಷ್ಟಿ ಬಜೆಟ್ ಎಂದು ಬಣ್ಣಿಸಿದ್ದಾರೆ.
ಕರ್ನಾಟಕದಲ್ಲಿ 1956 ನಂತರ ಚುನಾವಣಾ ವರ್ಷಗಳ ಮಧ್ಯಂತರ ಬಜೆಟ್ಗಳನ್ನು ಹೊರತುಪಡಿಸಿ, 70ಕ್ಕೂ ಹೆಚ್ಚು ವಾರ್ಷಿಕ ಮಂಡಿಸಿರುವ ಬಜೆಟ್ಗಳಲ್ಲಿ ಅತಿ ಹೆಚ್ಚು 17 ಬಜೆಟ್ಗಳನ್ನು ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದಲ್ಲಿ ಇತಿಹಾಸವನ್ನು ಸೃಷ್ಟಿ ಮಾಡಿದ್ದಾರೆ ಎಂದರು.
ಗೃಹಲಕ್ಷ್ಮಿ ಯೋಜನೆಗೆ 28,606 ಕೋಟಿ, ಗೃಹಜ್ಯೋತಿಗೆ 10,578 ಕೋಟಿ, ಶಕ್ತಿ ಯೋಜನೆಗೆ 5300 ಕೋಟಿ, ಅನ್ನಭಾಗ್ಯಕ್ಕೆ 6200 ಕೋಟಿ, ರಾಜ್ಯದ ಅನ್ನದಾತ ರೈತರಿಗೆ 70 ಸಾವಿರ ಕೋಟಿ ಸಾಲವನ್ನು ಬಜೆಟ್ನಲ್ಲಿ ಮೀಸಲಿರಿಸಲಾಗಿದೆ ಎಂದು ಹೇಳಿದ್ದಾರೆ.
ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೊಗ್ಯವನ್ನು ಸುಧಾರಿಸಲು 204 ಬಿಆರ್ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರನನ್ನು ನೇಮಕ ಮಾಡುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ 10 ಕೋಟಿ, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ, ಕರಾವಳಿಯಲ್ಲಿ ವಾಯುಯಾನ, ಜಲಯಾನ, ಪ್ರವಾಸಿ ಗೈಡ್ಗಳಿಗೆ ವಿವಿಗಳಲ್ಲಿ ಡಿಪ್ಲೋಮೊ ಕೋರ್ಸ್, ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ವಿತರಣೆಯ ಗುರಿಯನ್ನು ಹೊಂದಲಾಗಿದೆ. 1628 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ ಸೇರಿದಂತೆ ವಿವಿಧ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಒದಗಿಸಲು ದತ್ತಾಂಶದ ಆನ್ಲೈನ್ ನಿರ್ವಹಣೆ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸ್ಥಾಪನೆಗಾಗಿ ಆರ್ಬಿಐಗೆ ಪ್ರಸ್ತಾವನೆ ಸಲ್ಲಸಲಾಗಿದೆ.
ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗಗಳ ಮೇಲ್ದರ್ಜೆಗಾಗಿ 45 ಕೋಟಿ ರೂ, ಡಿಜಿಟಲ್ ಆರೋಗ್ಯ ಕಾರ್ಯಕ್ರಮದಡಿ ವಹಿಗಳ ಡಿಜಿಟಲೀಕರಣ ರೋಗಿಗಳ ಸಂಪೂರ್ಣ ಗಣಕೀಕೃತ ನೋಂದಣಿ, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ನಿರ್ವಹಣಾ ವೆಚ್ಚದ ದರಗಳ ಪರಿಷ್ಕರಣೆಗೆ ಹೆಚ್ಚುವರಿ 56 ಕೋಟಿ ರೂ. ಮೀಸಲಿಡಲಾಗಿದೆ.
ದೇಶದಲ್ಲಿ ಮಾದರಿ ರಾಜ್ಯವನ್ನಾಗಿ ಮಾರ್ಪಾಡಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾದ ಬಜೆಟ್ ಅನ್ನು ಮಂಡಿಸಿದ್ದು, ಇದರಿಂದ ರಾಜ್ಯವು ಪ್ರಗತಿಯ ಪಥದಲ್ಲಿ ಸಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದ್ದಾರೆ.
.jpg)
No comments:
Post a Comment