ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಎದುರಾಳಿ ತಂಡಕ್ಕೆ 256 ರನ್ ಗಳ ಗುರಿ ನೀಡಿತ್ತು. ಭಾರತದ ಪರ ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ತಲಾ ಅರ್ಧ ಶತಕಗಳೊಂದಿಗೆ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು. ಸಂಜು ಸಾಮ್ಸನ್ ಸತತ ಮೂರನೇ ಪಂದ್ಯದಲ್ಲಿ ಅರ್ಧ ಶತಕ ಗಳಿಸಿದರು.
ಬೃಹತ್ ರನ್ ಚೇಸಿಂಗ್ ಗೆ ಇಳಿದ ನ್ಯೂಜಿಲ್ಯಾಂಡ್ ತಂಡ 100 ರನ್ ಗಳನ್ನು ಗಳಿಸುವ ಮುನ್ನವೇ ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತು.
ಅಂತಿಮವಾಗಿ ಭಾರತದ ಎದುರು ನ್ಯೂಜಿಲ್ಯಾಂಡ್ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ 159 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವುದೇ ಹಾಲಿ ಚಾಂಪಿಯನ್ ತಂಡ ಸತತ 2ನೇ ಬಾರಿಗೆ ವಿಶ್ವಕಪ್ ಗೆದ್ದ ಇತಿಹಾಸವಿಲ್ಲ. ಆದರೆ ಭಾರತ ಈ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಸತತ 2ನೇ ಬಾರಿಗೆ ವಿಶ್ವಕಪ್ ಗೆದ್ದಿರುವುದು ಮೊದಲ ದಾಖಲೆಯಾಗಿದೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಬಾರಿ ವಿಶ್ವಕಪ್ ನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಭಾರತ ಕ್ರಿಕೆಟ್ ತಂಡ ಪಾತ್ರವಾಗಿದೆ.
2007 ರಲ್ಲಿ ಮೊದಲ ಬಾರಿಗೆ ಎಂಎಸ್ ಧೋನಿ ನೇತೃತ್ವದಲ್ಲಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನವನ್ನು ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಪಡೆದಿತ್ತು. ಆ ಬಳಿಕ 2024 ರಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿ 2ನೇ ಬಾರಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಈಗ ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿ 3ನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತ ಟಿ20 ಪುರುಷರ ವಿಭಾಗದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಟ್ರೋಫಿ ಗೆದ್ದ ತಂಡವಾಗಿದೆ

No comments:
Post a Comment