ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತ್ಯೇಕ ಆದಿವಾಸಿ ನಿಗಮಸ್ಥಾಪನೆ,ಪರಿ ಶಿಷ್ಟ ಜಾತಿಯ ಸಮುದಾಯಗಳಿಗೆ ಮೀಸಲಾತಿ ನೀಡಿರುವಂತೆ ಪರಿಶಿಷ್ಟ ವರ್ಗದ ಸಣ್ಣ,ಸಣ್ಣ ಸಮುದಾಯಗಳಿಗೂ ಮೀಸಲಾತಿ ಕಲ್ಪಿಸುವುದೂ ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ಆದಿವಾಸಿ ಪರಿಷತ್ತು ನಿರಂತರವಾಗಿ ಹೋರಾಟ ನಡೆಸಿದ ಫಲವಾಗಿ ಪ್ರಥಮ ಹಂತದಲ್ಲಿಈಬಾರಿಯ ಬಜೆಟ್ ನಲ್ಲಿ ಪ್ರತ್ಯೇಕ ನಿಗಮ ಸ್ಥಾಪನೆ ನಿರ್ಧಾರ ಕೈಗೊಂಡಿರುವುದು ಆದಿವಾಸಿ ಸಮುದಾಯಗಳಿಗೆ ಸರ್ಕಾರದ ಬಗ್ಗೆ ಭರವಸೆ ಮೂಡಿದೆ ಎಂದಿದ್ದಾರೆ.
ಆದಿವಾಸಿ ನಿಗಮ ಸ್ಥಾಪಿಸುವಂತೆ ಇತ್ತೀಚೆಗೆ ಜರುಗಿದ ವಿಶ್ವ ಆದಿವಾಸಿ ದಿನಾಚರಣೆ..,ಮತ್ತು ಭಗವಾನ್ ಬಿರ್ಸಾಮುಂಡಾರವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಆದಿವಾಸಿ ಪರಿಷತ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕಾ ಗೋಷ್ಟಿ ಗಳನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವ ಮೂಲಕ ಆಗ್ರಹಿಸಲಾಗಿತ್ತು.
ಸಂಘಟನೆಯ ರಾಜ್ಯಾಧ್ಯಕ್ಷ ಎಂ ಕೃಷ್ಣಯ್ಯ,ಗೌರವಾಧ್ಯಕ್ಷರಾದ ಕೆ.ಎಂ ಪ್ರೋ .ಮೇತ್ರಿಯವರ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿ ಗಳಿಗೆ ಖುದ್ದಾಗಿ ಮನವಿ ಸಲ್ಲಿಸಲಾಗಿತ್ತು.
ಮನವಿಯನ್ನು ಪುರಸ್ಕರಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಆದಿವಾಸಿ ಮುಖಂಡರ ಸಭೆ ನಡೆಸಿ ಚರ್ಚಿಸಿದ್ದರು.
ಸಭೆಯಲ್ಲಿ ಬಂದ ಅಹವಾಲುಗಳನ್ನು ಆಲಿಸಿ ಸಕಾರಾತ್ಮಕ ಅಂಶಗಳನ್ನು ಪರಿಗಣಿಸಿ ಆದಿವಾಸಿ ನಿಗಮಸ್ಥಾಪನೆಯ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದಿದ್ದಾರೆ.

No comments:
Post a Comment