ಗ್ರಾಮ ಪಂಚಾಯತಿ ಮಾಜಿ ಸದಸ್ಯೆ ಹಾಡಿಯ ವಾಸಿ ಜಲಜಾಕ್ಷಿ ಮೃತ ದುರ್ದೈವಿ, ಸೋಮವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ತಮ್ಮ ಮನೆಯ ಬಳಿಯ ಅರಣ್ಯದಂಚಿನಲ್ಲಿ ಸೀಗೆಕಾಯಿ ಹೆಕ್ಕುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ.
ಘಟನೆ ಸಂಬಂಧಿಸಿದಂತೆ ಗ್ರಾಮೀಣ ಭಾಗದ ಜನರು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಭಾಗದಲ್ಲಿ ದಿನನಿತ್ಯ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮನೆಯಿಂದ ಯಾರೂ ಹೊರಗೆ ಬರದೇ ಇರುವ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಮುಂದಾಗುವುದಿಲ್ಲ. ಹೀಗಾಗಿ ದಿನನಿತ್ಯ ಪ್ರಾಣಭಯದಲ್ಲೇ ಓಡಾಟ ನಡೆಸುವ ಅನಿವಾರ್ಯತೆ ಎದುರಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

No comments:
Post a Comment